SHIVAMOGGA LIVE NEWS | 3 SEPTEMBER 2023
SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಜಲಾಶಯ ನಂಬಿ ಭತ್ತ ನಾಟಿ
ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು ಕೊಡಬೇಕು ಎಂದು ಅಚ್ಚುಕಟ್ಟು ವ್ಯಾಪ್ತಿಯ ರೈತರು ಆಗ್ರಹಿಸಿದರು. ಅಲ್ಲದೆ ಶಿಕಾರಿಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ
ರಸ್ತೆ ತಡೆಯಿಂದ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಮಲ್ಲೇಶಪ್ಪ ಬಿ. ಪೂಜಾರ್, ನೀರಾವರಿ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವಿ ಆಲಿಸಿದರು.
ಅಧಿಕಾರಿಗಳು ಮನವೊಲಿಸಿ ರೈತರನ್ನು ಸಮಾಧಾನಪಡಿಸಿದರು. ಹಾಗಾಗಿ ರೈತರು ಪ್ರತಿಭಟನೆ ಕೈಬಿಟ್ಟರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200