SHIVAMOGGA LIVE NEWS | 28 AUGUST 2023
SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ MLA ಪುತ್ರಿ, JNNCE ವಿದ್ಯಾರ್ಥಿನಿ
ಸಚಿವ ಮಧು ಬಂಗಾರಪ್ಪ ಏನೆಲ್ಲ ಹೇಳಿದರು?
ಶರಾವತಿ ಸಂತ್ರಸ್ತರಿಗೆ ನೀಡಬೇಕಿದ್ದ ಭೂಮಿಯ ಡೀನೋಟಿಫಿಕೇಷನ್ ರದ್ಧತಿಯಿಂದ ಸಮಸ್ಯೆ ಉದ್ಭವವಾಗಿದೆ. ಇದನ್ನು ಪರಿಹರಿಸಲು ಬೆಂಗಳೂರಿನಲ್ಲಿ ಹಲವು ಭಾರಿ ಉನ್ನತ ಅಧಿಕಾರಿಗಳ ಸಭೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಯಲಿದೆ ಎಂದರು.
ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ಹಕ್ಕು ಕೊಡುವುದು ಪುಣ್ಯದ ಕೆಲಸ. ಎಸ್.ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ಅವರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಗತ್ಯವಿದೆ. ಮಣ್ಣಿನ ಋಣ ತೀರಿಸಿದ ಸಾರ್ಥಕತೆ ನಮ್ಮದಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ – BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ
ಶಾಸಕ ಬೇಳೂರು ಗೋಪಾಲಕೃಷ್ಣ ಏನಂದ್ರು?
‘ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ಅವರಿಂದಾಗಿ ರಾಜ್ಯದಲ್ಲಿ ಈಡಿಗ ಸಮುದಾಯದ ಘನತೆ ಹೆಚ್ಚಿದೆ. ರಾಜ್ಯದಲ್ಲಿ 60 ಲಕ್ಷ ಈಡಿಗರಿದ್ದು, ಈಡಿಗ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬಿಜೆಪಿಯಿಂದ ಗೆದ್ದ ಈಡಿಗ ಸಮುದಾಯದ ಶಾಸಕರು ಸಮಾಜದ ಒಳಿತಿಗಿಂತಲು ಆರ್‌ಎಸ್‌ಎಸ್ ಹೇಳಿದ ರೀತಿ ಕೇಳುತ್ತಿರುವುದು ಬೇಸರದ ಸಂಗತಿ.ʼ
ಇದನ್ನೂ ಓದಿ – ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್ ಕೊಡಲಿವೆ 4 ಎಕ್ಸ್‌ಪ್ರೆಸ್ ರೈಲುಗಳು, ಯಾವ ರೈಲು? ಟೈಮಿಂಗ್ ಏನು?
ಕಾಗೋಡು ತಿಮ್ಮಪ್ಪ ಏನಂದರು?
‘ಶಿಸ್ತು, ಗುರಿ ಇದ್ದಾಗ ಮಾತ್ರ ಯಾವುದೆ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯ. ಇನ್ನೊಂದು ಸಮುದಾಯ ಮತ್ತು ಧರ್ಮಕ್ಕೆ ತೊಂದರೆ ಆಗದಂತೆ ಕಾರ್ಯಕ್ರಮ ರೂಪಿಸಬೇಕು.’
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಶಿರಸಿ – ಸಿದ್ಧಾಪುರ ಶಾಸಕ ಭೀಮಣ್ಣ ಟಿ.ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200