ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 JUNE 2024
TUMKUR : ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮುಚ್ಚುವ ಆದೇಶ ಪುನರ್ ಪರಿಶೀಲಿಸಬೇಕು. ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ವತಿಯಿಂದ ಕೇಂದ್ರ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡದ್ದ ಸಂದರ್ಭ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ವಿಐಎಸ್ಎಲ್ ಕಾರ್ಖಾನೆ ನಂಬಿ ಸಾವಿರಾರು ಜನರು ಬದುಕು ಕಟ್ಟಿಕೊಂಡಿದ್ದಾರೆ. ಸರ್. ಎಂ.ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಲು ಈ ಕಾರ್ಖಾನೆಯನ್ನು ಉಳಿಸಬೇಕಿದೆ. ವಿದೇಶಿ ಕಂಪನಿಗಳು ಬೆಳೆಯುತ್ತಿರುವಾಗ ನಮ್ಮವರೇ ಸ್ಥಾಪಿಸಿದ ಕಾರ್ಖಾನೆಯನ್ನು ಉಳಿಸಿ, ಬೆಳಸಬೇಕಿದೆ ಎಂದು ಮನವಿಯಲ್ಲಿ ತಿಳಿಸಿದರು.
ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಿಗಳ ನಿಯೋಗ ಕರೆದು ಈ ಕುರಿತು ಚರ್ಚಿಸುವುದಾಗಿ ತಿಳಿಸಿದರು ಎನ್ನಲಾಗಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ಪ್ರಮುಖರಾದ ಶಾರದಾ ಅಪ್ಪಾಜಿಗೌಡ, ರಾಮಕೃಷ್ಣ, ತ್ಯಾಗರಾಜ್, ಕರುಣಾಮೂರ್ತಿ, ದೀಪಕ್ ಸಿಂಗ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422