ಶಿವಮೊಗ್ಗದಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ, ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳು ಸಮಾಜದ ಕುಂದುಕೊರತೆಗಳ ಮೇಲೆ ಬೆಳಕು ಚಲ್ಲುತ್ತಿದೆ. ಸಮಾಜದಲ್ಲಿನ ಆಗುಹೋಗುಗಳನ್ನು ಆಳುವವರಿಗೆ ತಿಳಿಸುವ ಕೆಲಸಗಳನ್ನು ಪತ್ರಿಕಾರಂಗ ಮಾಡುತ್ತಿವೆ ಎಂದರು.

ADVT JULY NANJAPPA HOSPITAL HOME LAB TESTING

ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ಮಾದ್ಯಮಗಳನ್ನು‌ ನಾವು ಗೌರವದಿಂದ‌‌ ಕಾಣಬೇಕು ಎಂದ ಅವರು ಪತ್ರಿಕೆಗಳಿಗೆ ಓದುಗರು ನಿಜವಾದ ಮಾಲೀಕರು.ವೃತಿ ಹಿರಿಮೆ ಕಾಪಾಡಿಕೊಳ್ಳಲು ಪತ್ರಕರ್ತರು ಹೆಚ್ಚಿನ ಗಮನಕೊಡಬೇಕು ಎಂದರು.

AVvXsEiDjhChwCSB7LAwO KlzcI8qyJR60Xbj9FQjjDuho9kYcImELdkl8tNlX62itJiwkG 5JJ0YM6Cym0uKO9rk1QwjiPmhNQ52R4OcibTDXWxWDy345nN3IUGjTMXboex2TsdU3e4ucV19zLxWqYx vgWiJZv78m nqVmn4 fbjoM47jZSVUj usI1voQeg=s926

ಗೃಹ ಸಚಿವ ಆರಗ ಜ್ಙಾನೇಂದ್ರ ಮಾತನಾಡಿ, ಸಂವಹನ ‌ಮಾನವನ ಜೀವನದಲ್ಲಿ ಅವಶ್ಯಕತೆ ಇದೆ. ದೃಶ್ಯ ಮಾದ್ಯಮಗಳ ವೈಭವೀಕರಣದಿಂದ ಮುದ್ರಣ ಮಾದ್ಯಮ ನೇಪತ್ಯಕ್ಕೆ ಸರಿಯುತ್ತದೆ ಎಂದು ಹೇಳಲಾಗುತ್ತಿತ್ತು.ಆದರೆ‌ ಮುದ್ರಣ ಮಾದ್ಯಮ ತನ್ನ ಓದುಗರನ್ನು ಹೆಚ್ಚಿಸಿಕೊಂಡಿರುವುದು  ಶ್ಲಾಘನೀಯ. ನಕಲಿ‌ ಪತ್ರಕರ್ತರ ನಡುವೆ ಅಸಲಿ ಪತ್ರಕರ್ತರು ಗುರುತಿಸಿಕೊಳ್ಳುವುದು ಕಷ್ಟವಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಸಾಕಷ್ಟು ಸೌಲಭ್ಯ ನೀಡಿದೆ ಎಂದರು.

ಹೆಚ್.ಎಸ್.ದೊರೆಸ್ವಾಮಿ ಪ್ರಶಸ್ತಿ ಪುರಸ್ಕೃತ ಪ್ರಜಾವಾಣಿಯ ಹಿರಿಯ ಪತ್ರಕರ್ತ ಹನೀಫ್ ಮಾತನಾಡಿ, ಕೋವಿಡ್ ನಂತಹ ಸಂಕಷ್ಟದ‌ ಸಮಯದಲ್ಲಿ ಪತ್ರಕರ್ತರ ನೆರವಿಗೆ ಬಂದಿರುವ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯ ಶ್ಲಾಘನೀಯ ಎಂದರು.

AVvXsEj62nFsSiFpqpSjcGpEOXYCVjxYAhMrst0UVoJdPHX2QIRljlonSgKvZ7ehemWGnlIHDuWHlYmXqxe3bTYjNRmnSi K75KSmkV65ZyPn 9Q24 eGSpUPeQVUOy98ER6DRlYHQkFb0waJ1blSVN KZI2L fVO4v6v7kn4VcIgM gqu7dSodUlUV12QQjWw=s926

ವಾರ್ಷಿಕ ದತ್ತಿ ಪ್ರಶಸ್ತಿ ಪಡೆದವರು

ಡಿವಿಜಿ ಪ್ರಶಸ್ತಿಯನ್ನು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸಂಪಾದಕರಾದ ರವಿ ಹೆಗಡೆ ಅವರಿಗೆ, ಎಚ್. ಎಸ್.ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ ಹನೀಫ್, ಪ್ರಜಾವಾಣಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್. ಎನ್.ಅಶೋಕ್ ಕುಮಾರ್, ಸಂಪಾದಕರು, ಗೊಮ್ಮಟವಾಣಿ, ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು, ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು, ಪಿ.ಆರ್.ರಾಮಯ್ಯಪ್ರಶಸ್ತಿ: ಯು.ಎಸ್. ಶೆಣೈ, ಸಂಪಾದಕರು, ಕುಂದಪ್ರಭ, ಗರುಡನಗಿರಿ ನಾಗರಾಜ್ ಪ್ರಶಸ್ತಿ: ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ  ಮಂದಾರ, ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ :ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು, ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ. ರೇಖಾ, ಸಂಪಾದಕರು, ಹೊಸಪೇಟೆಟೈಮ್ಸ್,ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ,ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ, ಪ್ರಜಾವಾಣಿ, ಹುಬ್ಬಳ್ಳಿ ,ಎಂ. ನಾಗೇಂದ್ರರಾವ್ ಪ್ರಶಸ್ತಿ : ಎನ್.ಡಿ.ಶಾಂತಕುಮಾರ್ ವಿಜಯವಾಣಿ, ಶಿವಮೊಗ್ಗ, ಮಿಂಚು ಶ್ರೀನಿವಾಸ್ ಪ್ರಶಸ್ತಿ: ರಾಮಸ್ವಾಮಿ ಹುಲಕೋಡು, ವಿಜಯಕರ್ನಾಟಕ ,ಹೆಚ್.ಎಸ್ ರಂಗಸ್ವಾಮಿ ಪ್ರಶಸ್ತಿ : ಪಿ.ಸುನೀಲ್ ಕುಮಾರ್ ಸಂಪಾದಕರು ‘ಸಿಟಿ ಹೈಲೈಟ್ಸ್’ ಬೆಂಗಳೂರು

AVvXsEiq2OOREqXjs ko0at q7N2n1R9Ld7VWd2xg7

ಸಂಘದ ವಿಶೇಷ ಪ್ರಶಸ್ತಿಗಳು

ಪ್ರಹ್ಲಾದಗುಡಿ, ವರದಿಗಾರರು, ಕನ್ನಡ ಪ್ರಭ, ರಾಯಚೂರು, ಮುನಿವೆಂಕಟೇಗೌಡ, ಹಿರಿಯ ಪತ್ರಕರ್ತರು ಕೋಲಾರ ,ಪ್ರಕಾಶ್ ರಾಮಜೋಗಿಹಳ್ಳಿ, ವಾರ್ತಾಭಾರತಿ, ಬೆಂಗಳೂರು,ಎಂ.ಕೆ. ರಾಘವೇಂದ್ರ ಮೇಗರವಳ್ಳಿ ವಿಜಯ ಕರ್ನಾಟಕದ ತೀರ್ಥಹಳ್ಳಿ ಇವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಪ್ರಶಸ್ತಿ ಪ್ರಧಾನ ಮಾಡಿದರು.

AVvXsEj9fkDVpi1ic6Or2HnlhySK0aUl EuPmksHooL mGBaMMb99EjFJ81FWqZAfmeAxk 1XFsOHebyu5 4lqDJB6NcAlxg6wrlYmPy lKF5Yqt9kEzdSUQdub KYCz9hdmb1xe XPSwy50Pyrl7TwjrR

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಿದರು. ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ರಾಜ್ಯ ಆರ್ಯ ವೈಶ್ಯ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್ ಆರುಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಕುಮಾರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ರವಿಕುಮಾರ್, ಮಾದ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಮತ್ತಿತರರು ಇದ್ದರು.

1632381453891714 0

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment