ಶಿವಮೊಗ್ಗ ಲೈವ್
SHIVAMOGGA LIVE NEWS | 17 APRIL 2024
SAGARA : ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ನಾಯಕ ಹಕ್ರೆ ಮಲ್ಲಿಕಾರ್ಜುನ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಗುರುವಾರ ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಕ್ರೆ ಮಲ್ಲಿಕಾರ್ಜುನ, ‘ಕಾಂಗ್ರೆಸ್ ಪಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಯಿಂದ ಬೇಸತ್ತು ಪಕ್ಷ ತೊರೆಯುತ್ತಿದ್ದೇನೆ. ಶಾಸಕರು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಲು ಹೋಗಲು ವಿಫಲವಾಗಿದ್ದಾರೆ. ಸದ್ಯ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ, ರಾಘವೇಂದ್ರ ಅವರ ನಾಯಕತ್ವದ ಅಗತ್ಯವಿದೆ. ಈ ಹಿನ್ನೆಲೆ ಗುರುವಾರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆʼ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಜಾವಳ್ಳಿಯಲ್ಲಿ ಯುವತಿಯನ್ನು ಕಾಡಿಗೆ ಎಳೆದೊಯ್ದ ಯುವಕರು, ಸ್ನೇಹಿತನ ಮೇಲೆ ಹಲ್ಲೆ, ರಾಬರಿ