ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MARCH 2024
SHIMOGA : ಕಳೆದ ರಾತ್ರಿ ದುಷ್ಕರ್ಮಿಗಳು ಮಚ್ಚಿನಿಂದ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು ತಲೆಯಲ್ಲೇ ಕಚ್ಚಿಕೊಂಡಿದ್ದು, ಸ್ಥಳೀಯರು ಆತನನ್ನು ಹಾಗೆಯೇ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಶಿವಮೊಗ್ಗದ ಹರಿಗೆಯಲ್ಲಿ ಘಟನೆ ಸಂಭವಿಸಿದೆ. ಬಾರ್ ಬೈಂಡಿಂಗ್ ಕೆಲಸ ಮಾಡುವ ಪ್ರಶಾಂತ್ ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಲೆಗೆ ಬೀಸಿದ್ದ ಮಚ್ಚು ಪ್ರಶಾಂತ್ ಅವರ ತಲೆಗೆ ಕಚ್ಚಿಕೊಂಡಿತ್ತು. ಅದನ್ನು ಹಾಗೆ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್ನನ್ನು ಸ್ಥಳೀಯರು ಬೈಕ್ನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಇದನ್ನೂ ಓದಿ – ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?
ಇನ್ನು, ತಲೆಯಲ್ಲಿ ಮಚ್ಚು ಸಿಕ್ಕಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಶಾಂತ್ ಸ್ಥಿತಿ ಗಂಭೀರವಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















