SHIVAMOGGA LIVE NEWS | SHIMOGA | 11 ಜೂನ್ 2022
ಮಂಕಿಪಾಕ್ಸ್ ಇನ್ನೂ ನಮ್ಮ ದೇಶದಲ್ಲಿ ವರದಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕು ಆಸ್ಪತ್ರೆಗಳಲ್ಲಿ 2 ರಿಂದ 4 ಮತ್ತು ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಮೀಸಲಿಡುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿ, ಮಂಕಿಪಾಕ್ಸ್ ರೋಗ ಲಕ್ಷಣಗಳೊಂದಿಗೆ ರೋಗಿಯ ಟ್ರಾವೆಲ್ ಹಿಸ್ಟರಿ ಅಥವಾ ಅಂತಹ ದೇಶಗಳಿಗೆ ಪ್ರಯಾಣಿಸಿ ಬಂದವರೊಂದಿಗೆ ಪರೀಕ್ಷೆಗೆ ಒಳಪಡಿಸಬೇಕು ಎಂದರು. ಈಗಾಗಲೇ ಕರೊನಾ ತಜ್ಞರ ಸಮಿತಿ ಇದ್ದು ಈ ಸಮಿತಿಯು ಮಂಕಿಪಾಕ್ಸ್ ಕುರಿತು ಜಾಗೃತಿ ಮೂಡಿಸಬೇಕು. ಖಾಸಗಿ ಆಸ್ಪತ್ರೆಗಳು ಇಂತಹ ರೋಗ ಲಕ್ಷಣಗಳು ಕಂಡುಬರುವ ರೋಗಿಗಳನ್ನು ಸರ್ಕಾರಿ ಸಂಸ್ಥೆಗಳಿಗೆ ಕಳುಹಿಸಿಕೊಡಬೇಕು ಎಂದರು.
ಮಂಕಿಪಾಕ್ಸ್ ಅಕ್ಯೂಟ್ ವೈರಲ್ ಝೂನೋಟಿಕ್ ಕಾಯಿಲೆಯಾಗಿದ್ದು ಸಂಪರ್ಕ, ದೇಹ ದ್ರವ್ಯ, ಗಾಯಗಳು, ರೆಸ್ಪಿರೇಟರಿ ಡ್ರಾಪ್‌ಲೆಟ್ ಮತ್ತು ಮಲಿನಯುಕ್ತ ವಸ್ತುಗಳಿಂದ ಹರಡುತ್ತದೆ. ಸೆಂಟ್ರಲ್ ಮತ್ತು ವೆಸ್ಟ್ ಆಫ್ರಿಕನ್ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆ ಭಾರತದಲ್ಲಿ ವರದಿಯಾಗಿಲ್ಲ. ಜ್ವರ, ದದ್ದು (ರಾಶ್), ಉಬ್ಬಿದ ಲಿಂಫ್‌ನೋಡ್ಸ್ ಈ ಕಾಯಿಲೆ ಲಕ್ಷಣ. ಕಾಯಿಲೆಗೆ ಕರೊನಾ ರೀತಿ 2 ರಿಂದ 4 ವಾರ ಐಸೋಲೇಷನ್‌ನಲ್ಲಿಡಬೇಕು. ಪರೀಕ್ಷೆಯನ್ನು ಪಿಸಿಆರ್, ಸ್ವಾಬ್ ಇತರ ರೀತಿ ಮಾಡಬಹುದಾಗಿದ್ದು ಸ್ಯಾಂಪಲ್‌ನ್ನು ಪುಣೆ ಲ್ಯಾಬ್‌ಗೆ ಕಳುಹಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ. ಸತೀಶ್ಚಂದ್ರ ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಾಧಿಕಾರಿ ಡಾ. ಒ.ಮಲ್ಲಪ್ಪ ಮಾತನಾಡಿ, ಮಂಕಿಪಾಕ್ಸ್‌ನಲ್ಲಿ ರೋಗಿಯ ಪ್ರಯಾಣದ ವಿವರ ಮುಖ್ಯ. ರೋಗ ಇರುವ ರಾಷ್ಟ್ರಗಳಿಗೆ ಪ್ರಯಾಣಿಸಿದ ಮತ್ತು ಪ್ರಯಾಣಿಸಿದವರ ಸಂಪರ್ಕ ಇರುವ ರೋಗಿಗಳನ್ನು ಮಂಕಿಪಾಕ್ಸ್ ಕಾಯಿಲೆಗೆ ಶಂಕಿತರನ್ನಾಗಿ ಪರೀಕ್ಷಿಸಬಹುದು ಎಂದರು.
ಡಿಎಚ್‌ಓ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ. ಒ.ಎಸ್.ಸಿದ್ದಪ್ಪ, ಆರ್‌ಸಿಎಚ್‌ಒ ಡಾ. ನಾಗರಾಜ್ ನಾಯ್ಕ, ಮೆಗ್ಗಾನ್ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಡಿಡಿಪಿಐ ಪರಮೇಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಜಿ.ಜಿ.ಸುರೇಶ್ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ KPSC ಪರೀಕ್ಷೆಯಲ್ಲಿ ನಕಲು ಮಾಡಲು ಮೊಬೈಲ್, ಸ್ಪೀಕರ್ ಬಳಕೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.