ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಡಿಸೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನೈಟ್ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ಈ ಭಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ರಾತ್ರಿ 10 ಗಂಟೆಯೊಳಗೆ ಜನರು ಮನೆ ಸೇರಬೇಕಿದೆ. ಇಲ್ಲವಾದಲ್ಲಿ ಪ್ರಕರಣ ದಾಖಲಿಸಲು ಶಿವಮೊಗ್ಗ ಪೊಲೀಸರು ನಿರ್ಧರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ನೈಟ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ತಿಳಿಸಿದರು.
10 ಗಂಟೆಯೊಳೆಗ ಹೊಸ ವರ್ಷಾಚರಣೆ
ಪ್ರತಿ ವರ್ಷ ರಾತ್ರಿ 12 ಗಂಟೆಗೆ ಹೊಸ ವರ್ಷಾಚರಣೆ ಮಾಡಲಾಗುತ್ತಿತ್ತು. ಆದರೆ ಈ ಭಾರಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹಾಗಾಗಿ ರಾತ್ರಿ 10 ಗಂಟೆಯೊಳಗೆ ಹೊಸ ವರ್ಷಾಚರಣೆ ಮಾಡಬೇಕಾಗಿದೆ. ಆ ಬಳಿಕ ಜನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಕುರಿತು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತದೆ.
ಹೊಟೇಲ್, ಬಾರ್, ರೆಸ್ಟೋರೆಂಟ್ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ, ವಹಿವಾಟುಗಳನ್ನು ರಾತ್ರಿ 10 ಗಂಟೆ ಒಳಗೆ ಸ್ಥಗಿತಗೊಳಿಸಬೇಕು.
ಕರ್ಫ್ಯೂ ಅವಧಿಯಲ್ಲಿ ಯಾರೊಬ್ಬರೂ ರಸ್ತೆಗಿಳಿಯದಂತೆ ತಡೆಯಲು ಅಲ್ಲಲ್ಲಿ ನಾಖಾಬಂಧಿ ಹಾಕಲಾಗುತ್ತದೆ. ಪೊಲೀಸರು ವಾಹನಗಳ ತಪಾಸಣೆ ನಡೆಸಲಿದ್ದಾರೆ. ಅನಗತ್ಯವಾಗಿ ರಸ್ತೆಗಿಳಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ.
ಅಗತ್ಯ ಮತ್ತು ತುರ್ತು ಸೇವೆಯಲ್ಲಿ ತೊಡಗಿಸಿಕೊಂಡವರು ಕರ್ಫ್ಯೂ ಅವಧಿಯಲ್ಲಿ ಓಡಾಡಬಹುದು. ಆದರೆ ಆ ಸಂಬಂಧ ದಾಖಲೆಗಳನ್ನು ಇಟ್ಟುಕೊಳ್ಳಬೇಕಿದೆ.