ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆನ್’ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಷೇರು ಸೇರಿದಂತೆ ವಿವಿಧೆಡೆ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಲಾಗುತ್ತಿದೆ. ಬಳಿಕ ಅಸಲು ಹಣವನ್ನೂ ಹಿಂತಿರುಗಿಸದೆ ಜನರನ್ನು ವಂಚಿಸುವ ಪ್ರಕರಣಗಳು ನಿತ್ಯ ವರದಿಯಾಗುತ್ತಿವೆ.
ಶಿವಮೊಗ್ಗದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕ ಮಾಡಿ, ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ದೂರು ದಾಖಲಾಗಿದ್ದು, ವಂಚಕರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹೇಗಾಯ್ತು ಈ ವಂಚನೆ?
ವಿದ್ಯಾರ್ಥಿನಿ ಬಳಕೆ ಮಾಡುತ್ತಿದ್ದ ಸಾಮಾಜಿಕ ಜಾಲತಾಣಕ್ಕೆ ವ್ಯಕ್ತಿಯೊಬ್ಬ ಮೆಸೇಜ್ ಮಾಡಿದ್ದಾನೆ. ಟ್ರೇಡಿಂಗ್’ನಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ವಿವಿಧ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ವಿದ್ಯಾರ್ಥಿನಿ ತನ್ನ ಬ್ಯಾಂಕ್ ಖಾತೆ ಮೂಲಕ ವಂಚಕ ಸೂಚಿಸಿದ ಯುಪಿಐ ಐಡಿಗೆ ಮೂರು ಭಾರಿ ಹಣ ವರ್ಗಾಯಿಸಿದ್ದಾರೆ.
ಒಟ್ಟು 65 ಸಾವಿರ ರೂ. ಹಣ ವರ್ಗಾಯಿಸಿಕೊಂಡ ವಂಚಕ, ಬಳಿಕ ಯಾವುದೆ ಪ್ರತಿಕ್ರಿಯೆ ನೀಡಿಲ್ಲ. ಅನುಮಾನಗೊಂಡ ವಿದ್ಯಾರ್ಥಿನಿ ಸ್ನೇಹಿತರು, ಕುಟುಂಬದವರೊಂದಿಗೆ ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚುತ್ತಿದೆ ಅನ್’ಲೈನ್ ವಂಚನೆ
ಹೂಡಿಕೆ, ಬಹುಮಾನದ ನೆಪದಲ್ಲಿ ಜನರನ್ನು ವಂಚಿಸುವ ಜಾಲ ಸಕ್ರಿಯವಾಗಿದೆ. ವಿವಿಧ ತಂತ್ರಜ್ಞಾಜನಗಳನ್ನು ಬಳಕೆ ಮಾಡಿಕೊಂಡು ಜನರನ್ನು ನಯವಾಗಿ ವಂಚಿಸುತ್ತಿದ್ದಾರೆ. ಈ ಬಗ್ಗೆ ಜನರು ಸ್ವಲ್ಪ ಜಾಗೃತರಾದರೆ ಸೈಬರ್ ವಂಚಕರಿಂದ ಪಾರಾಗಬಹುದಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200