ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯ ಎಲ್ಲಾ ಮತಗಟ್ಟೆಗಳಲ್ಲಿ ತಮಗೆ ಮುನ್ನಡೆ ಲಭಿಸಲಿದೆ. 300ಕ್ಕಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಪ್ರಸನ್ನ ಕುಮಾರ್, ಶಿಕಾರಿಪುರದಲ್ಲಿ ಸಮಬಲದ ಹೋರಾಟವಿರಲಿದೆ. ಉಳಿದೆಲ್ಲ ಕಡೆಯಲ್ಲೂ ತಮಗೆ ಅತಿ ಹೆಚ್ಚು ಮತಗಳು ಲಭಿಸಲಿವೆ ಎಂದು ತಿಳಿಸಿದರು.
ಗೆಲ್ಲುವ ವಿಶ್ವಾಸ, ಕೊಟ್ಟ ಕಾರಣಗಳೇನು?
ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ನನಗೆ ಹೆಚ್ಚಿನ ಮತ ಬಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಸಮಬಲದ ಹೋರಾಟ ನಡೆಸಿದ್ದೇನೆ. ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ತಾಲೂಕಿನಲ್ಲಿ ಹೆಚ್ಚಿನ ಮತಗಳು ಬಂದಿವೆ.
ಜೆಡಿಎಸ್ ಪಕ್ಷದ ಮತದಾರರು ಕೂಡ ನನಗೆ ಮತ ನೀಡಿದ್ದಾರೆ. ಶೇ.15ರಷ್ಟು ಬಿಜೆಪಿ ಬೆಂಬಲಿತ ಮತದಾರರ ಮತಗಳೂ ನನಗೆ ಬಂದಿವೆ. ಯಾವುದೇ ಮತಗಟ್ಟೆಗಳಲ್ಲಿ ತಮಗೆ ಕಡಿಮೆ ಮತಗಳು ಬಂದಿಲ್ಲ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಮಧುಬಂಗಾರಪ್ಪ, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ನನ್ನ ಪರ ಕೆಲಸ ಮಾಡಿದವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್.ಚಂದ್ರಭೂಪಾಲ, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್, ಎನ್. ರಮೇಶ್, ಡಾ.ಶ್ರೀನಿವಾಸ್, ಹನುಮಂತು, ಯು.ಶಿವಾನಂದ, ಕೆ.ರಂಗನಾಥ್, ವಿಜಯ ಕುಮಾರ್, ಇಕ್ಕೇರಿ ರಮೇಶ್, ದೀಪಕ್ ಸಿಂಗ್, ಮಧುಸೂದನ್, ಚೇತನ್, ದೇವಿಕುಮಾರ್, ಎಸ್.ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.