ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಡಿಸೆಂಬರ್ 2021
ರಾಗಿಗುಡ್ಡದ ನಾಗರಿಕರು ಇವತ್ತು ದಿಢೀರ್ ಪ್ರತಿಭಟನೆ ನಡೆಸಿದರು. ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.
ಜನರು ರಸ್ತೆ ತಡೆ ಮಾಡಿದ್ದರಿಂದ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಯಿತು. ಆದರೆ ಹನ್ನೊಂದು ವರ್ಷದಿಂದ ಸಮಸ್ಯೆ ಎದುರಿಸುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದರು.
ದಿಢೀರ್ ಪ್ರತಿಭಟನೆಗೆ ಕಾರಣವೇನು?
ಪಾಯಿಂಟ್ 1 – ಹನ್ನೊಂದು ವರ್ಷದಿಂದ ರಾಗಿಗುಡ್ಡದ ರಸ್ತೆಗಳು ಗುಂಡಿಮಯವಾಗಿವೆ. ಒಂಭತ್ತು ವರ್ಷದ ಹಿಂದೆ ಇದೆ ಗುಂಡಿಮಯ ರಸ್ತೆಯಿಂದಾಗಿ ಬಾಲಕನೊಬ್ಬ ಟ್ರಾಕ್ಟರ್ ಅಡಿ ಸಿಲುಕಿ ಮೃತಪಟ್ಟಿದ್ದ. ಆಗ ರಸ್ತೆ ರಿಪೇರಿಯ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ಭರವಸೆ ಈಡೇರಿಲ್ಲ.
ಪಾಯಿಂಟ್ 2 – ಸ್ಮಾರ್ಟ್ ಸಿಟಿ ನೆಪದಲ್ಲಿ ಶಿವಮೊಗ್ಗ ನಗರದ ವಿವಿಧ ರಸ್ತೆಗಳ ರಿಪೇರಿ ಕಾರ್ಯ ನಡೆಯುತ್ತಿದೆ. ರಾಗಿಗುಡ್ಡ ವಾರ್ಡ್ ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ಒಳಪಡುವುದಿಲ್ಲ. ಹಾಗಾಗಿ ಇಲ್ಲಿಯ ಕಾರ್ಪೊರೇಟರ್’ಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪಾಯಿಂಟ್ 3 – ರಾಗಿಗುಡ್ಡ ಏರಿಯಾ ಪಾಲಿಕೆಯ ಎರಡು ವಾರ್ಡ್ ವ್ಯಾಪ್ತಿಗೆ ಬರಲಿದೆ. ಹಾಗಾಗಿ ಇಬ್ಬರು ಕಾರ್ಪೊರೇಟರ್’ಗಳು ರಾಗಿಗುಡ್ಡವನ್ನು ಪ್ರತಿನಿಧಿಸುತ್ತಾರೆ. ಆದರೆ ಇಬ್ಬರು ಕಾರ್ಪೊರೇಟರ್’ಗಳೂ ರಸ್ತೆ ರಿಪೇರಿ ವಿಚಾರವಾಗಿ ಮಾತನಾಡುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಪಾಯಿಂಟ್ 4 – ರಾಗಿಗುಡ್ಡದಲ್ಲಿ ನಿರ್ಮಾಣವಾಗುತ್ತಿರವ ಹೊಸ ಲೇಔಟ್’ಗಳಿಗೆ ಅಪ್ರೋಚ್ ರಸ್ತೆ ಮಾಡಲಾಗುತ್ತಿದೆ. ಮನೆಗಳೆ ಇಲ್ಲದಿರುವ ಲೇಔಟ್’ಗಳಿಗೆ ರಸ್ತೆ ನಿರ್ಮಿಸಲಾಗುತ್ತಿದೆ. ಆದರೆ ಸಾವಿರಾರು ಜನರು ವಾಸವಿರುವ ಕಡೆಗೆ ರಸ್ತೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಯಿಂಟ್ 5 – ನಿತ್ಯ ಧೂಳು ಕುಡಿದು ಆರೋಗ್ಯ ಸಮಸ್ಯೆ ಉಂಟಾಗಿದೆ. ಈ ಭಾಗದಲ್ಲಿ ಶ್ವಾಸಕೋಶ ಸಮಸ್ಯೆಗೆ ತುತ್ತಾದವರ ಸಂಖ್ಯೆ ಹೆಚ್ಚುತ್ತಿದೆ. ಈ ಸಂಬಂಧ ಆಸ್ಪತ್ರೆಯ ದಾಖಲೆಗಳನ್ನು ಒದಗಿಸಲು ಸಿದ್ಧವಿದ್ದೇವೆ ಎಂದು ಪ್ರತಿಭಟನಾನಿರತ ಸ್ಥಳೀಯರು ಆರೋಪಿಸಿದ್ದಾರೆ.
‘ಪಾಲಿಕೆ ಕಚೇರಿಗೆ ಬೀಗ ಹಾಕ್ತೀವಿ’
ರಾಗಿಗುಡ್ಡ ರಸ್ತೆ ದುರಸ್ಥಿ ಕಾರ್ಯ ಮಾಡಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ. ಮಹಾನಗರ ಪಾಲಿಕೆ ಕಚೇರಿಗೆ ಬೀಗ ಹಾಕಿ ಹೋರಾಟ ನಡೆಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422