ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 1 MAY 2024
ELECTION NEWS : ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏ.2ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ರಾಹುಲ್ ಗಾಂಧಿ, ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಿದ್ಧತೆ ಪರಿಶೀಲಿಸಿದರು.
ಸಿಎಂ, ಡಿಸಿಎಂ ಕೂಡ ಭಾಗಿ
ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ‘ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ ಅವರ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿನಿಮಾ ನಟರು ಕೂಡ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧೆಡೆಯ ಜನರು ಭಾಗವಹಿಸಲಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದೊಡ್ಡ ಮಟ್ಟದಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ತಿಳಿಸಿದರು.
ಇದನ್ನೂ ಓದಿ – ಮಾನಹಾನಿ ಸುದ್ದಿ ಪ್ರಕಟಣೆಗೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್, ಕುತೂಹಲ ಮೂಡಿಸಿದ ಬೆಳವಣಿಗೆ





