ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021
ದೀಪಾವಳಿ ಪಟಾಕಿ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮಳೆ ಅಡ್ಡಿ ಉಂಟು ಮಾಡಿದೆ. ನಿರಂತರ ಮಳೆಯಿಂದಾಗಿ ದೀಪಾವಳಿ ಸಂಭ್ರಮ ತುಸು ಕಳೆಗುಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಶುರುವಾದ ಮಳೆ ನಿರಂತರವಾಗಿ ಬರುತ್ತಿದೆ.
ಜಿಟಿಜಿಟಿ ಮಳೆಯಿಂದಾಗಿ ಜನರು ಮನೆಯೊಳಗೆ ಉಳಿಯುವಂತಾಗಿದೆ. ಹಬ್ಬ ಮತ್ತು ಮಳೆಯಿಂದಾಗಿ ಶಿವಮೊಗ್ಗ ನಗರದಲ್ಲಿ ವಾಹನ ಮತ್ತು ಜನ ಸಂಚಾರ ಕಡಿಮೆ ಇದೆ.
ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಭದ್ರಾವತಿ ತಾಲೂಕಿನ ವಿವಿಧೆಡೆ ನಿರಂತರ ಜಿಟಿಜಿಟಿ ಮಳೆಯಾಗುತ್ತಿದೆ.