ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 OCTOBER 2023
SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಿಗದಿಯಾಗಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ತೀವ್ರ ಬರದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವಿಯ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ.ಗುರುಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ- ಬಡವರಿಗೆ ಮನೆ, ನಿವೇಶನಕ್ಕೆ ಆಗ್ರಹ, ಭದ್ರಾವತಿ ತಾಲೂಕು ಕಚೇರಿ ಮುಂಭಾಗ ಹೋರಾಟ
ನವಿಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಅ.27 ರಿಂದ ಅ.29ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ನಿಗದಿಯಾಗಿತ್ತು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಕೃಷಿ ಮತ್ತು ಕೃಷಿ ಸಂಬಂಧ ಅಭಿವೃದ್ಧಿ ಇಲಾಖೆಗಳ ಮತ್ತು ವಿಶ್ವವಿದ್ಯಾಲಯದ ವಿಸ್ತರಣಾ ಮುಖ್ಯಸ್ಥರ ಅಭಿಪ್ರಾಯದಂತೆ ಮೇಳವನ್ನು ರದ್ದುಪಡಿಸಲಾಗಿದೆ. ಮುಂದೆ ಬರ ನಿರ್ವಹಣೆಗೆ ಪೂರಕವಾದ ತಾಂತ್ರಿಕ ವಿಚಾರ ಗೋಷ್ಠಿಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422