ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2023
SHIMOGA : ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕ್ರೀಡಾಕೂಟಕ್ಕೆ (Sports) ಚಾಲನೆ ನೀಡಲಾಯಿತು. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ನ್ಯಾ. ಮಂಜುನಾಥ ನಾಯ್ಕ, ಪೊಲೀಸರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ. ಕೆಲಸದ ಒತ್ತಡದಲ್ಲಿಯೇ ಪೊಲೀಸರು ದಿನ ಕಳೆಯುತ್ತಿದ್ದಾರೆ. ಕ್ರೀಡೆಯಿಂದ ಮಾನಸಿಕ ವಿಕಾಸವಾಗುತ್ತದೆ. ದಿನವಿಡೀ ಲವಲವಿಕೆಯಿಂದಿ ಇರಬಹುದು. ಕ್ರೀಡೆಯಿಂದ ವೃತ್ತಿಜೀವನ ಸಂತಸದಾಯಕವಾಗಿರುತ್ತದೆ ಎಂದರು.
ಇದನ್ನೂ ಓದಿ- ಸಂಬಂಧಿಯ ಮನೆಯಿಂದ ಮರಳಿದ ಕುಟಂಬಕ್ಕೆ ಕಾದಿತ್ತು ಆಘಾತ, ಪೊಲೀಸ್ ಠಾಣೆಗೆ ದೌಡು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ಕುಮಾರ್ ಭೂಮರೆಡ್ಡಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422