SHIVAMOGGA LIVE NEWS | SHIMOGA FM | 22 ಏಪ್ರಿಲ್ 2022
ಬಿಜೆಪಿ ಸರ್ಕಾರ ಸಾವಿನ ವಿಚಾರದಲ್ಲಿ ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ವಿತರಣೆ ಮಾಡಿದೆ. ಆದರೆ ಬೆಳ್ತಂಗಡಿಯಲ್ಲಿ ಹತ್ಯೆಯಾದ ದಿನೇಶನ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ. ನರಗುಂದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮುಸ್ಲಿಂ ವ್ಯಕ್ತಿಯ ಹತ್ಯೆಯಾಯ್ತು. ಆತನ ಕುಟುಂಬಕ್ಕೇಕೆ ಪರಿಹಾರ ನೀಡಲಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಸೆಕ್ಷನ್ ಉಲ್ಲಂಘಿಸಿದ್ಯಾರು?
ಹರ್ಷ ಕೊಲೆ ಬಳಿಕ ಶಿವಮೊಗದಲ್ಲಿ 144 ಸೆಕ್ಷನ್ ವಿಧಿಸಲಾಗಿತ್ತು. ಇದನ್ನು ಉಲ್ಲಂಘನೆ ಮಾಡಿದ ಈಶ್ವರಪ್ಪ ಅವರು ಯಾವ ಪಕ್ಷಕ್ಕೆ ಸೇರಿದವರು. ಯಾವುದೆ ಕೊಲೆಯಾದರೂ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ | ರಾಜ್ಯದಲ್ಲಿ ಬುಲ್ಡೋಜರ್ ರಸ್ತೆಗಿಳಿಸುವ ಚರ್ಚೆಗೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಖಡಕ್ ತಿರುಗೇಟು