ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021
ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ ಆಯೋಜಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಚಿತ್ರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ಕ್ಲಬ್ ಅಧ್ಯಕ್ಷ ಪ್ರೀತಮ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೀತಮ್, ಡಿ.19ರಂದು ಶಿವಮೊಗ್ಗದ ಎನ್ಇಎಸ್ ಮೈದಾದನಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ತಳಿಯ ಸುಮಾರು 300 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಚಾರ್ಲಿ 777 ಸಿನಿಮಾ ತಂಡ
ನಟ ರಕ್ಷಿತ್ ಶೆಟ್ಟಿ ಅವರು ಶ್ವಾನವನ್ನು ಕೇಂದ್ರವಾಗಿಟ್ಟುಕೊಂಡು ‘ಚಾರ್ಲಿ 777’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರ ತಂಡವು ಶಿವಮೊಗ್ಗದಲ್ಲಿ ನಡೆಯುತ್ತಿರುವ ಶ್ವಾನ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದೆ. ಚಿತ್ರದ ಪ್ರಚಾರದ ಉದ್ದೇಶದಿಂದ ಸಿನಿಮಾ ತಂಡ ಭಾಗವಹಿಸಲಿದೆ ಎಂದು ಪ್ರೀತಿಮ್ ತಿಳಿಸಿದರು.
ಇನ್ನು, ಶ್ವಾನ ಪ್ರದರ್ಶನದಲ್ಲಿ ಮೊದಲ ಬಹುಮಾನ 25 ಸಾವಿರ, ಎರಡನೇ ಬಹುಮಾನ 20 ಸಾವಿರ, ಮೂರನೆ ಬಹುಮಾನ 15 ಸಾವಿರ, ಉತ್ತಮ ಶ್ವಾನಗಳಿಗೆ ಐದರಿಂದ ಒಂದು ಸಾವಿರ ರೂ. ವರೆಗೂ ಬಹುಮಾನ ಇರಲಿದೆ. ಇದೆ ವೇಳೆ ಶ್ವಾನಗಳ ಫ್ಯಾಷನ್ ಶೋ ಕೂಡ ನಡೆಯಲಿದ್ದು, ಮಾಲೀಕರು ಕೂಡ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.
ಡಾಗ್ ಶೋನಲ್ಲಿ ಪಾಲ್ಗೊಳ್ಳಲು 7676441122, 9964289695 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200