ಬಟ್ಟೆಮಲ್ಲಪ್ಪ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದ ಪಿಯುಸಿ ವಿದ್ಯಾರ್ಥಿನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2023

ಹೊಸನಗರ : ಚಲಿಸುತ್ತಿದ್ದ ಬಸ್ಸಿನಿಂದ (moving bus) ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿಯೊಬ್ಬಳು ಗಾಯಗೊಂಡಿದ್ದಾಳೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

Hosanagara-Police-Station-Board

ಗಾಣಿಗ ಗ್ರಾಮದಿಂದ ಹೊಸನಗರದಲ್ಲಿರುವ ಕಾಲೇಜಿಗೆ ಖಾಸಗಿ ಬಸ್ಸಿನಲ್ಲಿ (moving bus) ತೆರಳುವಾಗ ಬಟ್ಟೆಮಲ್ಲಪ್ಪ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಸ್ಸಿನ ಡೋರ್ ಹಾಕದಿರುವುದು ಮತ್ತು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಿಯುಸಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಕೆಯ ತಲೆ, ಮುಖ, ಮೈ, ಕೈಗೆ ಗಾಯವಾಗಿದೆ.

Shimoga Live News Update 3 Million reach

ಕೂಡಲೆ ಇತರೆ ಪ್ರಯಾಣಿಕರು ಆಕೆಯನ್ನು ಹೊಸನಗರದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸನಗರ ಠಾಣೆಯಲ್ಲಿ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ನಾಳೆ ಸಾಗರ ಬಂದ್, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್

(ವಿದ್ಯಾರ್ಥಿನಿ ಹೆಸರು ಪ್ರಕಟಿಸದಂತೆ ಮನವಿ ಮಾಡಲಾಗಿದೆ)

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 10, 2023

Leave a Comment