ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021
ಶಿವಮೊಗ್ಗ ಸೇರಿದಂತೆ ರಾಜ್ಯ ಎಂಟು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ನವೆಂಬರ್ 9ರವರೆಗೆ ಮಳೆ ಮುಂದುವರೆಯಲಿದೆ. ಆ ಬಳಿಕ ಮಳೆ ಪ್ರಮಾಣದ ತಗ್ಗಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವವಿದೆ. ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ ಸುರಿಯಲಿದೆ?
ಶಿವಮೊಗ್ಗ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ನವೆಂಬರ್ 7 ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
(ತುರ್ತು ಪರಿಸ್ಥಿತಿ ಎದುರಾಗುವ ಮೊದಲೆ ಪರೀಕ್ಷೆಗೆ ಒಳಗಾಗಿ. ನಿಮ್ಮ ಮನೆಗೆ ಬಂದು ಪರೀಕ್ಷಿಸುತ್ತಾರೆ ತಜ್ಞರು. ಕೆಳಗಿರುವ ನಂಬರ್’ಗೆ ಕರೆ ಮಾಡಿ)
ಮೂರ್ನಾಲ್ಕು ದಿನದಿಂದ ಮಳೆ
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಮಳೆಯಾಗುತ್ತಿದೆ. ಕೆಲವು ಕಡೆ ಮಳೆ ಜಿಟಿಜಿಟಿ ಮಳೆಯಾದರೆ, ಇನ್ನೂ ಕೆಲವು ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.
ಹೊಸನಗರದಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಹೊಸನಗರ ಪಟ್ಟಣದಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲೂ ಮಳೆಯಾಗಿದೆ. ಶಿವಮೊಗ್ಗದಲ್ಲಿ ಕೆಲವು ಕಾಲ ಮೋಡ ಕವಿದ ವಾತಾವರಣವಿತ್ತು.
ಈ ಮಳೆಯಿಂದಾಗಿ ರೈತರು ಚಿಂತೆಗೀಡಾಗಿದ್ದಾರೆ. ಮಳೆಯಿಂದಾಗಿ ಅಡಕೆ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಅಡಕೆ ಉದುರುತ್ತಿದ್ದು, ಈ ಭಾರಿ ಉತ್ತಮ ಇಳುವರಿ ಸಿಗುವುದಿಲ್ಲವೇನೋ ಎಂದು ಚಿಂತೆಗೀಡಾಗಿದ್ದಾರೆ. ಇನ್ನು, ಭತ್ತದ ಬೆಳೆದವರು ಕೂಡ ಭೀತಿಯಲ್ಲಿದ್ದಾರೆ.
(ಶಿವಮೊಗ್ಗದಲ್ಲಿ ಇದೇ ಮೊದಲು – ಲೈವ್ ಕಿಚಿನ್, ಏಳು ನಿಮಿಷದಲ್ಲಿ ರೆಡಿಯಾಗುತೆ ಕೇಕ್ – ಈಗಲೆ ಫೋನ್ ಮಾಡಿ, ನಿಮ್ಮ ಆರ್ಡರ್ ಬುಕ್ ಮಾಡಿ)
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200