ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನದ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಲಸಿಕಾ ಮೇಳ ಆಯೋಜಿಸಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ಮೇಳಕ್ಕೆ ಚಾಲನೆ ನೀಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯ 80 ಸಾವಿರ ಜನರಿಗೆ ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಇದಕ್ಕಾಗಿ ಅಗತ್ಯ ಸಿದ್ದತೆಯನ್ನು ಮಾಡಿಕೊಂಡಿದೆ.
ಲಸಿಕಾ ಆಭಿಯಾನಕ್ಕಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 400 ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿ ಕೇಂದ್ರದಲ್ಲಿ 250 ರಿಂದ 300 ಡೋಸ್ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 34 ಕಡೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200