ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಪಕ್ಷ-ಜಾತಿಗೆ ಸೀಮಿತವಾಗದೆ ಎಲ್ಲ ಸಮಾಜದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ನಾಗರಿಕ ಸನ್ಮಾನ ಹಮ್ಮಿಕೊಂಡಿರುವುದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ | ಯಡಿಯೂರಪ್ಪ ಅವರಿಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಅನುಶ್ರೀ, ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಭಾವಾಭಿನಂದನೆ
ಸಿಎಂ ಜನ್ಮದ ದಿನದ ಹಿನ್ನೆಲೆಯಲ್ಲಿ ಫೆ.28ರಂದು ನಗರದ ಫ್ರೀಡಂಪಾರ್ಕ್ನಲ್ಲಿ ನಾಗರಿಕ ಸನ್ಮಾನ ಹಮ್ಮಿಕೊಂಡಿದ್ದು ವಿವಿಧ ಸಂಘಟನೆಗಳು ಸಮಾರಂಭಕ್ಕೆ ಕೈಜೋಡಿಸಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಯಡಿಯೂರಪ್ಪ ಅವರು ಸಿಎಂ ಆದ ಮೇಲೆ ಶಿವಮೊಗ್ಗದ ಚಿತ್ರಣ ಬದಲಾಗಿದೆ. ಸಾವಿರಾರು ಕೋಟಿ ರೂ. ಅನುದಾನ ಸಿಕ್ಕಿದೆ. ಸರ್ಕಾರಿ ನೌಕರರ ಬಹುತೇಕ ಎಲ್ಲ ಬೇಡಿಕೆಗಳನ್ನೂ ಈಡೇರಿಸಿದ್ದಾರೆ. ಜತೆಗೆ ವಿಮಾನ ನಿಲ್ದಾಣ, ನೀರಾವರಿ ಯೋಜನೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಸಾಹಿತ್ಯ ಚಟುವಟಿಕೆ, ರೈಲ್ವೆ ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಸಂಘ, ಪ್ರೆಸ್ಟ್ರಸ್ಟ್, ಮಾಚೇನಹಳ್ಳಿ ಕೈಗಾರಿಕಾ ಸಂಘ ಸೇರಿ ವಿವಿಧ ಸಂಘ ಸಂಸ್ಥೆಗಳಿಗೆ ನೆರವು ನೀಡಿದ್ದಾರೆ ಎಂದರು.
ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಸಾಪ ಜಿಲ್ಲಾಧ್ಯಕ್ಷ ಡಿ.ಬಿ.ಶಂಕರಪ್ಪ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗೆಡೆ, ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ರಂಗಪ್ಪ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]