ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ಕೋರನ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಿದ್ದರೂ ಶಿವಮೊಗ್ಗದಲ್ಲಿ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಕಡಿಮೆಯೇನಿಲ್ಲ. ಇದೆ ಕಾರಣಕ್ಕೆ ದಿನೇ ದಿನೆ ವಾಹನಗಳು ಸೀಜ್ ಆಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ.
ಜಿಲ್ಲೆಯಾದ್ಯಂತ ಶುಕ್ರವಾರ 152 ವಾಹನಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ 147 ದ್ವಿಚಕ್ರ ವಾಹನ. ನಾಲ್ಕು ಕಾರುಗಳಿವೆ. ಅನಗತ್ಯವಾಗಿ ರಸ್ತೆಗಿಳಿದಿದ್ದರಿಂದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಮೋಟಾರ್ ವೆಹಿಕಲ್ ಕಾಯ್ದೆ ಅಡಿ 152 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ 64,800 ರೂ. ದಂಡ ವಿಧಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]