ಶಿವಮೊಗ್ಗ ಲೈವ್.ಕಾಂ | SHIMOGA | 28 ಸೆಪ್ಟೆಂಬರ್ 2019

ಹಿಂದೂ ಯುವಕರ ಮೇಲೆ ನಿರಂತರ ದಾಳಿಯಾಗುತ್ತಿದೆ. ಆದರೂ ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ದಾಳಿಗೆ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿ ನಡೆಸಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ಜಾಧವ್, ಶಿವಮೊಗ್ಗದಲ್ಲಿ ಇತ್ತೀಚೆಗೆ ಸುಮನ್ ಎಂಬ ಯುವಕನ ಮೇಲೆ ಹಲ್ಲೆಯಾಗಿದೆ. ಕೆಲ ಹಿಂದೂ ಯುವಕರ ಮನೆಗಳಿಗೆ ತೆರಳಿ ಬೆದರಿಕೆ ಹಾಕಲಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಪ್ರೀತಿ ಪ್ರೇಮದ ಹೆಸರಿನಲ್ಲಿ ಅಮಾಯಕ ಯುವತಿಯರನ್ನು ಲವ್ ಜಿಹಾದ್’ಗೆ ಒಳಪಡಿಸಲಾಗುತ್ತಿದೆ. ಈ ಬಗ್ಗೆ ಪ್ರಶ್ನೆ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತಿದೆ. ಆದರೂ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತು ಜಾಗೃತಿ ನಿರಂತವಾಗಿ ಮುಂದುವರೆಸಲಿದ್ದೇವೆ ಎಂದು ಅವರು ತಿಳಿಸಿದರು.
ಬಜರಂಗದಳ ನಗರ ಸಂಯೋಜಕ ರಾಜೇಶ್ ಗೌಡ, ಜಿಲ್ಲಾ ಸಂಯೋಜಕ ನಾರಾಯಣ ವರ್ಣೇಕರ್, ವಿಶ್ವ ಹಿಂದೂ ಪರಿಷತ್’ನ ನಟರಾಜ್, ನಾಗೇಶ್ ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]