ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 9 ಸೆಪ್ಟೆಂಬರ್ 2019
ತನಿಖಾ ಸಂಸ್ಥೆಗಳನ್ನು ಉಪಯೋಗಿಸಿಕೊಂಡು ಕೇಂದ್ರ ಸರ್ಕಾರ, ಒಕ್ಕಲಿಗ ಸಮುದಾಯದ ಉದ್ಯಮಿಗಳು, ರಾಜಕಾರಣಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಇವತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕುಶಾವತಿಯಲ್ಲಿ ಇರುವ ಒಕ್ಕಲಿಗ ಸಂಘ ಭವನದಿಂದ ಮೆರವಣಿಗೆ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ಕೇಂದ್ರ ಸರ್ಕಾರ ಐಟಿ, ಇಡಿ ಸಂಸ್ಥೆಯನ್ನು ಉಪಯೋಗಿಸಿಕೊಂಡು ಮೋದಿ ಮತ್ತು ಅಮಿತ್ ಷಾ ಅವರು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ವ್ಯವಸ್ಥಿತವಾಗಿ ಸಂಚು ರೂಪಿಸಿ ಬಂಧಿಸಿದ್ದಾರೆ. ತನಿಖೆಗೆ ಸ್ಪಂದಿಸುತ್ತಿದ್ದರು ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಆದರೆ ಬಿಜೆಪಿಯವರಿಗೆ ತಮ್ಮ ಪಕ್ಷದಲ್ಲಿರುವ ಭ್ರಷ್ಟಾಚಾರಿಗಳೆ ಕಣ್ಣಿಗೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರವಿದ್ದಾಗ ಯಡಿಯೂರಪ್ಪ ಅವರನ್ನು ಬಂಧಿಸಲಾಗಿತ್ತು ಎಂದು ಟಿವಿ ಮಾಧ್ಯಮಗಳಲ್ಲಿ ಬರುತ್ತಿದೆ. ವಾಸ್ತವದಲ್ಲಿ ಖಾಸಗಿ ದೂರಿನ ಅನ್ವಯ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆದು ಬಂಧನವಾಗಿದ್ದು ಎಂದು ಕಿಮ್ಮನೆ ರತ್ನಾಕರ್ ಸ್ಪಷ್ಟಪಡಿಸಿದರು.
ಕೇಂದ್ರದ ಬಿಜೆಪಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ವ್ಯವಸ್ಥಿತವಾಗಿ ಈ ಸಮುದಾಯವನ್ನು ಮುಗಿಸಲು ಹೊರಟಿದೆ ಎಂದು ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಆರೋಪಿಸಿದರು.
ಬಾಳೇಹಳ್ಳಿ ಪ್ರಬಾಕರ್, ಕಿರಣ್ ಪ್ರಭಾಕರ್, ಅಂಬಳಿಕೆ ಗಿರೀಶ್, ಕೆ.ಕೃಷ್ಣಮುರ್ತಿ, ಕಾಂಗ್ರಸ್ ಮುಖಂಡರಾದ ಕೆಸ್ತೂರು ಮಂಜುನಾಥ್, ವೆಂಕಟೇಶ್ ಹೆಗ್ಡೆ, ಹಾರೋಗೊಳಿಗೆ ಪದ್ಮಾನಾಭ್, ಶಚಿಂದ್ರ ಹೆಗ್ಡೆ, ಭಾರತಿ ಪ್ರಭಾಕರ್, ಹಸಿರು ಮನೆ ನಂದನ್, ಮೈಥಿಲಿ ಸತೀಶ್, ಸುಪ್ರಭ ಸಂದೀಪ್, ನಯನ ಶೆಟ್ಟಿ, ಗೀತಾರಮೇಶ್, ಸುಶೀಲಾ ಶೆಟ್ಟಿ ಮುಂತಾದವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
