SHIVAMOGGA LIVE NEWS | 26 MARCH 2024
SHIMOGA : ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಆದ್ದರಿಂದ ಭದ್ರಾ ನದಿಗೆ 2 ಟಿಎಂಸಿ ನೀರು ಹರಿಸಲಾಗುತ್ತಿದೆ. ಮಾ.29ರಂದು ಮಧ್ಯರಾತ್ರಿಯಿಂದ ಪ್ರತಿದಿನ ತಲಾ 3 ಸಾವಿರ ಕ್ಯೂಸೆಕ್ನಂತೆ ಏ.6ರ ಮಧ್ಯರಾತ್ರಿವರೆಗೆ ನೀರು ಹರಿಸಲಾಗುತ್ತದೆ. ಈ ಸಂದರ್ಭ ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಡುವುದು, ಜಾನುವಾರುಗಳನ್ನು ಮೇಯಿಸುವುದು ಸೇರಿದಂತೆ ಯಾವುದೇ ಚಟುವಟಿಕೆ ನಡೆಸುವುದು ಮತ್ತು ಪಂಪ್ಸೆಟ್ಗಳಿಂದ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಅಡಿಕೆ ಧಾರಣೆ | 25 ಮಾರ್ಚ್ 2024 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?