ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವು ವಿಸರ್ಜನೆ ಮಾಡಲಾಗಿದೆ. ಹಾಗಾಗಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನುವ ಕುತೂಹಲದ ನಡುವೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತ ಶಿವಮೊಗ್ಗದಲ್ಲೂ ಈ ಕುರಿತು ಲೆಕ್ಕಾಚಾರಗಳು ಗರಿಗೆದರಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈಶ್ವರಪ್ಪಗೆ ಮತ್ತೆ ಒಲಿಯುತ್ತಾ ಮಿನಿಸ್ಟರ್ ಪಟ್ಟ?
ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟಿದ ಕೆ.ಎಸ್.ಈಶ್ವರಪ್ಪ ಕೂಡ ಈಗ ಮಾಜಿಯಾಗಿದ್ದಾರೆ. ನೂತನ ಮುಖ್ಯಮಂತ್ರಿಯ ಸಂಪುಟದಲ್ಲಿ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಲಭಿಸುತ್ತೆಯೋ ಇಲ್ಲವೋ ಅನ್ನುವುದು ಪ್ರಶ್ನೆಯಾಗಿದೆ.
ಸಿಗಬಹುದು ಅನ್ನಲು ಕಾರಣ
ಹಿರಿಯ ಮುಖಂಡ, ಸಚಿವರಾಗಿ ಕಾರ್ತವ್ಯ ನಿರ್ವಹಿಸಿದ ಅನುಭವವಿದೆ. ಆರೋಗ್ಯ ಮತ್ತು ವಯಸ್ಸು ಕೂಡ ಪೂರಕವಾಗಿವೆ. ಈ ಕಾರಣಗಳಿಂದ ಈಶ್ವರಪ್ಪ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿಯಬಹುದು.
ಸಚಿವ ಸ್ಥಾನ ಸಿಗಲ್ಲ ಅನ್ನಲು ಕಾರಣ
ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎಂದು ಹೇಳಲಾಗುತ್ತಿರುವ ಆಡಿಯೋದಲ್ಲಿ ಈಶ್ವರಪ್ಪ ಅವರನ್ನು ಕೆಳಗಿಳಿಸುವ ಕುರಿತು ಪ್ರಸ್ತಾಪಿಸಲಾಗಿತ್ತು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಎರಡು ಬಾರಿಯೂ ಈಶ್ವರಪ್ಪ ಅವರು ಸಚಿವರಾಗಿದ್ದರು. ಉಪ ಮುಖ್ಯಮಂತ್ರಿಯೂ ಆಗಿದ್ದರು. ಈಗ ಹೊಸಬರಿಗೆ ಅವಕಾಶ ನೀಡುವ ಸಲುವಾಗಿ ಈಶ್ವರಪ್ಪ ಅವರಿಗೆ ಕೊಕ್ ಕೊಡುವ ಸಂಭವವಿದೆ.
ಮತ್ಯಾರಿಗೆ ಸಿಗಬಹುದು ಸಚಿವ ಸ್ಥಾನ?
ಒಂದು ವೇಳೆ ಕೆ.ಎಸ್.ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದರೆ ಜಿಲ್ಲೆಯ ಯಾವ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಹಿರಿಯ ಶಾಸಕರ ಪೈಕಿ ಒಬ್ಬರು. ಸಚಿವರಾಗುವ ಅರ್ಹತೆ ಇದೆ. ಜಾತಿವಾರು ಲೆಕ್ಕಚಾರದ ಪ್ರಕಾರ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೈಕಮಾಂಡ್ ದೃಷ್ಟಿಯಲ್ಲಿ ಕ್ಲೀನ್ ಹ್ಯಾಂಡ್ ಎಂಬ ಅಭಿಪ್ರಾಯವಿದೆ. ಹಾಗಾಗಿ ಸಚಿವ ಸ್ಥಾನ ಲಭಿಸಬಹುದು ಎಂಬ ವಾದವಿದೆ.
ಸಾಗರ ಶಾಸಕ ಹರತಾಳು ಹಾಲಪ್ಪ
ಹರತಾಳು ಹಾಲಪ್ಪ ಅವರು ಒಮ್ಮೆ ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಆಡಳಿತದ ಅನುಭವವಿದೆ. ಪ್ರಬಲ ಈಡಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಯಸ್ಸು, ಆರೋಗ್ಯದ ವಿಚಾರದಲ್ಲಿ ತೊಂದರೆ ಇಲ್ಲ. ಹಾಗಾಗಿ ಇವರಿಗೆ ಅವಕಾಶ ಸಿಗುವ ಲೆಕ್ಕಾಚಾರವು ಇದೆ.
ಸೊರಬ ಶಾಸಕ ಕುಮಾರ್ ಬಂಗಾರಪ್ಪ
ಕುಮಾರ್ ಬಂಗಾರಪ್ಪ ಕೂಡ ಈ ಹಿಂದೆ ಸಚಿವರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಎಂಬುದು ಪ್ಲಸ್ ಪಾಯಿಂಟ್. ಈಡಿಗ ಸುಮುದಾಯಕ್ಕೆ ಸೇರಿದವರು. ಸಮರ್ಥವಾಗಿ ಸಚಿವ ಸ್ಥಾನ ನಿಭಾಯಿಸಬಹುದು ಎಂಬ ಲೆಕ್ಕಾಚಾರವಿದೆ.
ಈಡಿಗ ಸಮುದಾಯಕ್ಕೆ ಸೇರಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಸಚಿವ ಸ್ಥಾನದ ರೇಸ್ನಲ್ಲಿದ್ದಾರೆ. ಒಂದು ವೇಳೆ ಸುನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಖಚಿತವಾದರೆ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಅವರು ಸಚಿವ ಸ್ಥಾನದ ರೇಸ್ನಿಂದ ಹೊರಗುಳಿಯಬಹುದು ಎಂದು ಹೇಳಲಾಗುತ್ತಿದೆ.
ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಅನ್ನುವ ಲೆಕ್ಕಾಚಾರದ ನಡುವೆ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರಾರು ಅನ್ನುವ ಕುತೂಹಲವು ಗರಿಗೆದರಿದೆ. ವಾರಾಂತ್ಯದೊಳಗೆ ಈ ಲೆಕ್ಕಾಚಾರಕ್ಕೆಲ್ಲ ಬ್ರೇಕ್ ಬೀಳುವ ಸಂಭವವಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200