SHIVAMOGGA LIVE | 2 JUNE 2023
THIRTHAHALLI : ಕಾಣೆಯಾಗಿದ್ದ ಮಹಿಳೆಯೊಬ್ಬರ (Woman) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ಘಟನೆ ಸಂಭವಿಸಿದೆ.
ಶಶಿಕಲಾ (30) ಮೃತ ಮಹಿಳೆ. ಮನೆಯ ಹಿಂಭಾಗದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, ಒಂದೇ ದಿನ 1587 ಪ್ರಕರಣ ದಾಖಲು
ಗುರುವಾರ ರಾತ್ರಿಯಿಂದ ಶಶಿಕಲಾ ಕಾಣೆಯಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಆಕೆಯ ಪತಿ ಸುಬ್ರಹ್ಮಣ್ಯ, ತೀರ್ಥಹಳ್ಳಿ ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಮಧ್ಯಾಹ್ನದ ವೇಳೆಗೆ ಕಾಡಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ