ಶಿವಮೊಗ್ಗ ಲೈವ್.ಕಾಂ | SHIMOGA | 1 ಅಕ್ಟೋಬರ್ 2019
ಓಪನ್ ಆದ ಮೊದಲ ದಿನವೆ ಮಹಿಳೆಯರು ಮದ್ಯದಂಗಡಿಗೆ ಮುತ್ತಿಗೆ ಹಾಕಿ ಬಂದ್ ಮಾಡಿಸಿದ್ದಾರೆ. ನವುಲೆ ಬಳಿಯ ತ್ರಿಮೂರ್ತಿ ನಗರದಲ್ಲಿ ಘಟನೆ ನಡೆದಿದೆ.

ಜನವಸತಿ ಪ್ರದೇಶ, ಶಾಲೆಯ ಸಮೀಪದಲ್ಲಿ ಮದ್ಯದಂಗಡಿ ತೆರೆಯಲಾಗಿತ್ತು. ಮೊದಲ ದಿನವೆ ಮದ್ಯದಂಗಡಿಗೆ ಮುತ್ತಿಗೆ ಹಾಕಿದ ಮಹಿಳೆಯರು, ಬಾರ್’ನಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ತ್ರಿಮೂರ್ತಿನಗರದ ಶ್ರೀ ವಿಘ್ನೇಶ್ವರ ಕನ್ನಡ ಯುವಕರ ಸೇವಾ ಸಮಿತಿ, ಯುವಕರ ಸಂಘಟನೆಗಳು ಮಹಿಳೆಯರಿಗೆ ಬೆಂಬಲ ನೀಡಿದವು.
ಸ್ಥಳೀಯರು ಮದ್ಯದಂಗಡಿಗೆ ಮುತ್ತಿಗೆ ಹಾಕಿದ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಮದ್ಯದಂಗಡಿ ಬಂದ್ ಮಾಡಿಸಿದ್ದಾರೆ. ಇನ್ನು, ಇಲ್ಲಿ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಸ್ಥಳೀಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
