ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಆಗಸ್ಟ್ 2019
ಇದ್ಯಾವುದು ಆಗದೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಅತಿವೃಷ್ಟಿಯಿಂದ ರಾಜ್ಯದಲ್ಲಿ ಭಾರಿ ಹಾನಿಯಾಗಿದೆ. ಸಿಎಂ ಯಡಿಯೂರಪ್ಪ ಅವರು ಹೇಳಿದಂತೆ ಸುಮಾರು 50 ಸಾವಿರ ಕೋಟಿ ನಷ್ಟವಾಗಿದೆ. ಆದರೆ ಕೇಂದ್ರ ಸರ್ಕಾರದ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಆದರೆ, ಮಧ್ಯಂತರ ಪರಿಹಾರವಾಗಿ ಈ ಕೂಡಲೆ 5 ಸಾವಿರ ಕೋಟಿ ರೂ. ನೆರವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ಮೋದಿಗೆ ಬಂದು ಪರಿಶೀಲಿಸಲಿ
ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು. ಇನ್ನು, ಅತಿವೃಷ್ಠಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದು ಚರ್ಚಿಸಬೇಕು. ಒಂದು ವೇಳೆ ಇದ್ಯಾವುದು ಆಗದೆ ಇದ್ದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಬೇಕು ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದರು.
ಬದುಕು ಕುಟ್ಟಿಕೊಡುವ ಕೆಲಸ ಮಾಡಲಿ
ಕಾಂಗ್ರೆಸ್ ಪಕ್ಷದ ಸಮೀಕ್ಷೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 11 ಸಾವಿರ ಎಕರೆ ಹಾನಿಗೀಡಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ. ಈ ಜನರು ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದರು.

ನೆರೆಪೀಡಿತ ಪ್ರದೇಶಗಳಿಗೆ ಭೇಟಿ, ಪರಿಶೀಲನೆ
ಇದಕ್ಕು ಮೊದಲು ಶಿವಮೊಗ್ಗ ಮತ್ತು ಸಾಗರದ ವಿವಿಧೆಡೆ ನೆರೆಪೀಡಿತ ಪ್ರದೇಶಗಳಿಗೆ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು, ಸಂತ್ರಸ್ತರ ಜೊತೆಗೆ ಚರ್ಚಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಮಾಜಿ ಶಾಸಕ ಪ್ರಸನ್ನಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]