ಶಿವಮೊಗ್ಗ ಲೈವ್.ಕಾಂ | SHIKARIPURA | 9 ಅಕ್ಟೋಬರ್ 2019
ಸ್ನೇಹಿತರ ಜೊತೆಗೆ ನದಿಯಲ್ಲಿ ಈಜಲು ತೆರಳಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಶಶಾಂಕ್ (17) ಮೃತ ಯುವಕ. ಕುಮದ್ವತಿ ನದಿಗೆ ಈಜಲು ತೆರಳಿದ್ದ ಶಶಾಂಕ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ.
ಶಶಾಂಕ್, ವಿನಾಯಕ ಬಡಾವಣೆ ನಿವಾಸಿ ಸತೀಶ್ ಎಂಬುವವರ ಪುತ್ರ. ಘಟನೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
